News (ಸುದ್ದಿ)
ಇನ್ಮುಂದೆ ಮಾಸ್ಕ್ ಹಾಕಿದವರಿಗೆ ಮಾತ್ರಾ ಪೆಟ್ರೋಲ್: heggaddesamachar.com

ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಮನೆಯಿಂದ ಹೊರ ಬರುವವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಅದರಂತೆ ಇದೀಗ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಕೂಡ ಈ ಅಭಿಯಾನಕ್ಕೆ ಸಾಥ್ ನೀಡಿದೆ. ಇನ್ನು ಮುಂದೆ ಮಾಸ್ಕ್ ಇಲ್ಲದವರಿಗೆ ಪೆಟ್ರೋಲ್ ಹಾಕದಿರಲು ನಿರ್ಧರಿಸಲಾಗಿದೆ. ಕರ್ನಾಟಕ ರಾಜ್ಯ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ವತಿಯಿಂದ ನೋ ಮಾಸ್ಕ್ ನೋ ಫ್ಯೂಯಲ್ ಅಭಿಯಾನ ಕೈಗೊಳ್ಳಲಾಗಿದೆ.
ರಾಜ್ಯದ ಎಲ್ಲಾ ಪೆಟ್ರೋಲ್ ಬಂಕ್ ಗಳಲ್ಲಿ ಇನ್ನು ಮುಂದೆ ಮಾಸ್ಕ್ ಧರಿಸಿದವರಿಗೆ ಮಾತ್ರ ಪೆಟ್ರೋಲ್ ಹಾಕಲಾಗುವುದು ಎಂದು ಹೇಳಲಾಗಿದೆ. ಮನೆಯಿಂದ ಹೊರ ಬರುವವರು ಮಾಸ್ಕ್ ಕಡ್ಡಾಯವಾಗಿ ಧರಿಸುವಂತೆ ಸೂಚನೆ ನೀಡಿದ್ದು, ಇದಕ್ಕೆ ಪೆಟ್ರೋಲ್ ಬಂಕ್ ಮಾಲೀಕರು ಕೂಡ ಬೆಂಬಲಿಸಿದ್ದಾರೆ. ಪೆಟ್ರೋಲ್ ಬಂಕ್ ಗಳಲ್ಲಿ ಕೆಲಸ ಮಾಡುವ ಕಾರ್ಮಿಕರು, ಸೇಲ್ಸ್ ಮನ್ ಆರೋಗ್ಯ ಭದ್ರತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
