ಎಸ್.ಸಿ.ಬಸವರಾಜು ರವರಿಗೆ ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಸ್ಥಾನ ನೀಡುವಂತೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಿಂದ ಮಾಜಿ ಮುಖ್ಯಮಂತ್ರಿ ಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಸಾಹೇಬರಲ್ಲಿ ಮನವಿ: heggaddesamachar

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ನಾಯಕ ಸಮಾಜದ ಪ್ರಭಾವಿ ಮುಖಂಡರಾದ ಶ್ರೀಯುತ ಎಸ್.ಸಿ.ಬಸವರಾಜುರವರಿಗೆ ಕಾಂಗ್ರೆಸ್ ಪಕ್ಷದಿಂದ ತೆರವುಗೊಳ್ಳತ್ತಿರುವ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಆಯ್ಕೆ ಮಾಡಬೇಕಾಗಿ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ನವರು, ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು, ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ರವರು, ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ರವರು ಹಾಗೂ ವರುಣಾ ವಿಧಾನ ಸಭಾ ಕ್ಷೇತ್ರದ ಶಾಸಕರು ಜನಪ್ರಿಯ ನಾಯಕರಾದ ಶ್ರೀ ಯತೀಂದ್ರ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮನವಿ.
ಇವರು ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ , ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹಾಗೂ ಕೆಪಿಸಿಸಿ ಕಾರ್ಯದರ್ಶಿಯಾಗಿ ಯಾವುದೇ ಕಪ್ಪು ಚುಕ್ಕಿ ಇಲ್ಲದೆ ಪಕ್ಷದ ಪರವಾಗಿ ಕೆಲಸ ಮಾಡಿಕೊಂಡು ಬಂದಿರುತ್ತಾರೆ.

ಎಸ್.ಸಿ. ಬಸವರಾಜುರವರಿಗೆ ಎಂ.ಎಲ್.ಸಿ.ಸ್ಥಾನ ನೀಡಿದರೆ ಹಳೆ ಮೈಸೂರು ಭಾಗದ ಮೈಸೂರು, ಚಾಮರಾಜನಗರ,ಹಾಸನ, ಕೊಡಗು ಮತ್ತು ಮಂಡ್ಯ ಈ ಐದು ಜಿಲ್ಲೆಗಳಲ್ಲಿ ನಾಯಕ ಸಮಾಜವಲ್ಲದೆ ಇತರೆ ಸಮುದಾಯದ ಜೋತೆಗೂಡಿ ಪಕ್ಷ ಸಂಘಟನೆ ಮಾಡಲು ಮುಂದಿನ ದಿನಗಳಲ್ಲಿ ಅನುಕೂಲವಾಗುತ್ತದೆ