News (ಸುದ್ದಿ)
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಯೋಜನೆಯಡಿ ಸಿದ್ದಗೊಂಡ ವಿವಿಧ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮ ಮುಂದೂಡಿಕೆ: heggaddesamachar

ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಯೋಜನೆಯಡಿ ಸಿದ್ದಗೊಂಡ ವಿವಿಧ ಕಾಮಗಾರಿಗಳ ನಾಳೆ ನಡೆಯಬೇಕಿದ್ದ ಉದ್ಘಾಟನಾ ಕಾರ್ಯಕ್ರಮ ಮುಂದೂಡಲಾಗಿದೆ.
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಯೋಜನೆಯಡಿ ಕಾಮಗಾರಿ ದೇವಳದ ನೂತನ ಗೋಶಾಲೆ, ಆದಿ ಸುಬ್ರಮಣ್ಯ ಬಳಿ ಇರುವ ನೂತನ ವಸತಿ ಗೃಹ, ಆದಿ ಸುಬ್ರಹ್ಮಣ್ಯ ಬಳಿಯ ಪುರುಷ ಹಾಗೂ ಮಹಿಳೆಯರ ಶೌಚಾಲಯ ಕಟ್ಟಡ ಮತ್ತು ಸವಾರಿ ಮಂಟಪದ ಬಳಿಯ ಶೌಚಾಲಯ ಕಟ್ಟಡದ ಉದ್ಘಾಟನೆ ಕಾರ್ಯ ನಡೆಯಬೇಕಿದ್ದು

ಕರ್ನಾಟಕ ಮುಜುರಾಯಿ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದರು.ಈ ನಡುವೆ ಸಚಿವರಿಗೆ ತುರ್ತು ಬೇರೆ ಕಾರ್ಯಕ್ರಮಗಳಿರುವುದರಿಂದ ನಾಳಿನ ಈ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿಗಳು ತಿಳಿಸಿದ್ದಾರೆ.