News (ಸುದ್ದಿ)

ಕೇಂದ್ರ ಸರ್ಕಾರದಿಂದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ: heggaddesamachar

Spread the love

ಕೇಂದ್ರ ಸರ್ಕಾರದಿಂದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರು ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಉಮಾದೇವಿ ಮಾತನಾಡಿ ದೇಶದಲ್ಲಿ‌ ಕೊರೊನಾ ಹಾವಳಿಯಿಂದ ಜನರು ಸಂಕಷ್ಟದಲ್ಲಿದ್ದಾರೆ.ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ದಿನೇ ದಿನೇ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಾಡುತ್ತಲೆ ಬಂದಿದ್ದಾರೆ.

ಆದ್ದರಿಂದ ಈ ಕೋವಿಡ್ 19 ಸಂಕಷ್ಟದ ಕಾಲದಲ್ಲಿ ಜನರ ಮೇಲೆ ಹೆಚ್ಚಿನ ಹೊರೆ ಹಾಕದೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಕೇಂದ್ರದ ಅಬಕಾರಿ ಸುಂಕ ಮತ್ತು ರಾಜ್ಯದ ವ್ಯಾಟ್ ತೆರಿಗೆಗಳನ್ನು ಕಡಿತಗೊಳಿಸಬೇಕು. ಎಲ್ಲಾ ಕೋವಿಡ್-19 ಸೋಂಕಿತರಿಗೆ ಸರ್ಕಾರಿ ವೆಚ್ಚದಲ್ಲೇ ಚಿಕಿತ್ಸೆ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಸೆಕ್ರೆಟರಿಯೇಟ್ ಸದಸ್ಯರಾದ ಚಂದ್ರಶೇಖರ್ ಮೇಟಿ, ಸೀಮಾ, ಸಂಧ್ಯಾ, ಹರೀಶ್, ಆಸಿಯಾ, ಕಲಾವತಿ, ಸುನಿಲ್, ಚಂದ್ರಕಲಾ, ಬಸವರಾಜು ಮತ್ತಿತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *