News (ಸುದ್ದಿ)
ಕೊರೊನಾ ವೈರಸ್ ಕುರಿತಂತೆ ಮತ್ತೊಂದು ಸ್ಪೋಟಕ ಮಾಹಿತಿ ಬಿಚ್ಚಿಟ್ಟ ವಿಜ್ಞಾನಿಗಳು: heggaddesamachar.com

ಕೊರೊನಾ ವೈರಸ್ ಕುರಿತಂತೆ ಮತ್ತೊಂದು ಸ್ಪೋಟಕ ಮಾಹಿತಿಯನ್ನು ಭಾರತೀಯ ವಿಜ್ಞಾನಿಗಳು ನೀಡಿದ್ದು, ಮಳೆಗಾಲದಲ್ಲಿ ಕೊರೊನಾ ವೈರಸ್ ಮತ್ತೊಮ್ಮೆ ದಾಳಿ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಗ್ರೇಟರ್ ನೋಯ್ಡಾ ಶಿವನಾಡರ್ ವಿಶ್ವವಿದ್ಯಾಲಯದ ಸಹಪ್ರಾಧ್ಯಾಪಕ ಸಮಿತ್ ಭಟ್ಟಾಚಾರ್ಯ ಮತ್ತು ಬೆಂಗಳೂರಿನ ವಿಜ್ಞಾನ ಸಂಸ್ಥೆಯ ಪ್ರೊಫೆಸರ್ ರಾಜೇಶ್ ಸುಂದರೇಶನ್ ಈ ಕುರಿತು ಮಾಹಿತಿ ನೀಡಿದ್ದು, ಕೊರೊನಾ ವೈರಸ್ ಜುಲೈ ನಿಂದ ಆಗಸ್ಟ್ ವೇಳೆ ಮಳೆಗಾಲದ ಸಂದರ್ಭದಲ್ಲಿ ಮತ್ತೊಮ್ಮೆ ಸೋಂಕು ಹರಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಬೆಂಗಳೂರು ಮತ್ತು ಮುಂಬೈ ಮಾದರಿಯಾಗಿಟ್ಟುಕೊಂಡು ಅಧ್ಯಯನ ನಡೆಸಲಾಗಿದ್ದು, ಅಂತರ ಕಾಯ್ದುಕೊಳ್ಳುವುದು, ಕ್ವಾರಂಟೈನ್ ಮುಂದುವರಿಕೆ ಅಗತ್ಯವಾಗಿದೆ ಎಂದು ಸಲಹೆ ನೀಡಲಾಗಿದೆ.
