ಖಾಸಗಿ ಆಸ್ಫತ್ರೆಯಲ್ಲಿ ಕೋವಿಡ್ ರೋಗಿಗಳ ಪರೀಕ್ಷೆ ಕಡ್ಡಾಯಗೊಳಿಸಿ: heggaddesamchar

ಕೋವಿಡ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ದರ ನಿಗದಿಪಡಿಸಿರುವುದನ್ನು ರದ್ದುಗೊಳಿಸಲು ಮತ್ತು ಕಡ್ಡಾಯ ಚಿಕಿತ್ಸೆಗೆ ಒತ್ತಾಯಿಸಿ ಭಾರತ ಕಮ್ಯೂನಿಷ್ಟ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರು ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ದ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಬಸವರಾಜು ಮಾತನಾಡಿ ಕೋವಿಡ್ ಸೋಂಕಿತ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ದರ ನಿಗದಿ ಮಾಡಿಎಉವ ರಾಜ್ಯ ಸರ್ಕಾರದ ತೀರ್ಮಾನ ಜನವಿರೋಧಿಯಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗ.

ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಿ ಗುಣಪಡಿಸುವುದು ರಾಜ್ಯ ಸರ್ಕಾರದ ಪ್ರಾಥಮಿಕ ಜವಾಬ್ದಾರಿ. ಈ ಜವಾಬ್ದಾರಿಯನ್ನು ಖಾಸಗಿ ಆಸ್ಪತ್ರೆಗಳಿಗೆ ವಹಿಸಿ ಕೈತೊಳೆದುಕೊಳ್ಳಲು ರಾಜ್ಯ ಸರ್ಕಾರ ಹೊರಟಿದೆ ಎಂದು ಆರೋಪಿಸಿದರು.
ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ವಶಕ್ಕೆ ಪಡೆದು ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಸದಸ್ಯರು ಭಾಗಿಯಾಗಿದ್ದರು.