News (ಸುದ್ದಿ)

ಪೌರತ್ವ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ: ವಾಟಾಳ್ ನಾಗರಾಜ್ ಸೇರಿ ಅನೇಕರ ಬಂಧನ heggaddesamachar.com

Spread the love

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರು, ಕಲಬುರಗಿ, ಬಳ್ಳಾರಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದು ತಾರಕ್ಕಕ್ಕೇರಿದ್ದು ಅನೇಕರನ್ನು ಬಂಧಿಸಲಾಗಿದೆ.

ನಿಷೇದಾಜ್ಞೆ ನಡುವೆಯೂ ಸಿಎಎ
ವಿರೋಧಿಸಿ ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾಗ ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ನೂರಾರು ಮಂದಿಯನ್ನ ಪೋಲೀಸರು ಬಂಧಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ ಆರ್ ಸಿ ಜಾರಿ ವಿರೋಧಿಸಿ ಎಡಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಹಲವೆಡೆ ಪ್ರತಿಭಟನೆ ನಡೆಸುತ್ತಿವೆ.

ಅಲ್ಲದೇ ಮನೆಯಲ್ಲಿಯೇ ವಾಟಾಳ್ ನಾಗರಾಜ್ ಬಂಧನ ಅವರನ್ನೂ ಬಂಧಿಸಿದ್ದು, ಸದಾಶಿವ ನಗರದಲ್ಲಿರುವ ಅವರ ಮನೆಯಲ್ಲಿಯೇ ಅವರನ್ನ ವಶಕ್ಕೆ ಪಡೆಯಲಾಯಿತು ಎಂದು ಪೋಲೀಸ್ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *