Jobs & ಶಿಕ್ಷಣ

ಪ್ರಥಮ ಪಿ.ಯು.ಸಿ ಫಲಿತಾಂಶ ಮೇ.5 ಕ್ಕೆ: heggaddesamachar.com

Spread the love

ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ನಿರ್ದೇಶನದಂತೆ ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಮೇ 5.ರಂದು, ಈಗಾಗಲೇ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಂಡಿರುವ ಪ್ರಥಮ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜು‌ಮಟ್ಟದಲ್ಲಿಯೇ ನಿರ್ವಹಿಸಲು‌ ಮಾನದಂಡಗಳನ್ನು ಮುಂದೆ ತಿಳಿಸಲಾಗುವುದು ಎಂದೂ ಸಹ ಸುತ್ತೋಲೆ ಸ್ಪಷ್ಟ ಪಡಿಸಿದೆ. ಖಾಸಗಿ ಕಾಲೇಜುಗಳು ಈ ಸಾಲಿನಲ್ಲಿ‌ ಶುಲ್ಕ ಹೆಚ್ಚಿಸುವ ಹಾಗಿಲ್ಲ.

ಖಾಸಗಿ ಪಿಯು ಕಾಲೇಜುಗಳು ಇಂತಹ ಸಾಮಾಜಿಕ ಸಂಕಷ್ಟದ ಸಂದರ್ಭ ದಲ್ಲಿ ಅಸಹಾಯಕ ಪೋಷಕರಿಂದ ವಿದ್ಯಾರ್ಥಿಗಳ ಶುಲ್ಕ ಪಾವತಿಗೆ ಒತ್ತಾಯಿಸಬಾರದು.

Leave a Reply

Your email address will not be published. Required fields are marked *