News (ಸುದ್ದಿ)

ಭೂ ಸುಧಾರಣ ಕಾಯ್ದೆ ತಿದ್ದುಪಡಿ ನಿರ್ಧಾರ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ: heggaddesamachar

Spread the love

ಭೂ ಸುಧಾರಣ ಕಾಯ್ದೆ ತಿದ್ದುಪಡಿ ನಿರ್ಧಾರ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ. ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ.

ಸರ್ಕಾರ ತಿದ್ದುಪಡಿ ತೀರ್ಮಾನ ಹಿಂಪಡೆಯುವಂತೆ ವಿವಿಧ ಘೋಷಣೆ ಕೂಗಿ ಆಕ್ರೋಶ. ರಾಜ್ಯ ಸರ್ಕಾರದ ಸಚಿವ ಸಂಪುಟ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ತೀರ್ಮಾನಿಸಿರುವುದು ಆತಂಕಕಾರಿ.

ಉಳುವವರಿಂದ ಭೂಮಿ ಕಿತ್ತುಕೊಂಡು ಉಳ್ಳವರನ್ನು ಭೂಮಿಯ ಒಡೆಯರನ್ನಾಗಿ ಮಾಡಲು ಈ ಕಾಯ್ದೆ ಜಾರಿಗೊಳಿಸಲು ಮುಂದಾಗಿದ್ದಾರೆ. ಈ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ನಮ್ಮ ವಿರೋಧವಿದೆ.

ರೈತ ವಿರೋಧಿ ಜನ ವಿರೋಧಿ ತೀರ್ಮಾನವನ್ನು ಈ ಕೂಡಲೇ ಹಿಂಪಡೆಯಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಮಿತಿಯ ಸದಸ್ಯರು ಭಾಗಿ.

Leave a Reply

Your email address will not be published. Required fields are marked *