News (ಸುದ್ದಿ)

ಮಂಡ್ಯ ಮೈಶುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನ, ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ತೀರ್ಮಾನಿಸುವುದಾಗಿ ಮುಖ್ಯಮಂತ್ರಿಗಳ ಭರವಸೆ : heggaddesamachar

Spread the love

ಬೆಂಗಳೂರು, ಮೇ 29: ಮಂಡ್ಯ ಜಿಲ್ಲೆಯ ಸಂಸದರು ಹಾಗೂ ಶಾಸಕರು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಐತಿಹಾಸಿಕ ಮಹತ್ವವುಳ್ಳ ಮಂಡ್ಯದ ಮೈ ಶುಗುರ್ ಕಾರ್ಖಾನೆ ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಯಬೇಕು ಹಾಗೂ ಜಿಲ್ಲೆಯ ರೈತರನ್ನು ಕಾಪಾಡಬೇಕು ಎಂದು ನಿಯೋಗವು ಮುಖ್ಯಮಂತ್ರಿಗಳಿಗೆ ಮನವಿ ಮಾಡಿತು.

ಮೈ ಶುಗರ್ ಸಕ್ಕರೆ ಕಾರ್ಖಾನೆಯನ್ನು ಪುಶ್ಚೇತನಗೊಳಿಸಲು ಸರ್ಕಾರ ಬದ್ಧವಾಗಿದ್ದು, ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಹಾಗೂ ಸರ್ಕಾರವೇ ಕಾರ್ಖಾನೆಯ ಸಂಪೂರ್ಣ ನಿರ್ವಹಣೆ ಮಾಡುವುದರ ಸಾಧಕ ಬಾಧಕಗಳ ಬಗ್ಗೆ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ತೋಟಗಾರಿಕೆ ಸಚಿವ ನಾರಾಯಣಗೌಡ, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಶಾಸಕರಾದ ಅನ್ನದಾನಿ, ಕೆ.ಟಿ. ಶ್ರೀಕಂಠೇಗೌಡ, ರವೀಂದ್ರ ಶ್ರೀಕಂಠಯ್ಯ, ರೈತ ನಾಯಕಿ ಸುನಂದಾ ಜಯರಾಂ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *