ಮಠಗಳ ಪೀಠಾಧಿಪತಿಗಳಿಂದ ಸಿ.ಎಂ ಭೇಟಿ-ಪರಿಹಾರ ನಿಧಿಗೆ ದೇಣಿಗೆ: heggaddesamachar

ರಾಜ್ಯದ ವಿವಿಧ ಮಠಗಳ ಪೀಠಾಧಿಪತಿಗಳ ನಿಯೋಗ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆಯನ್ನು ಸಲ್ಲಿಸಿದರು.
ಈ ನಿಯೋಗದಲ್ಲಿ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಕುಂಚಟಿಗ ಗುರುಪೀಠದ ಶಾಂತವೀರ ಸ್ವಾಮೀಜಿ, ಉಪ್ಪಾರ ಗುರುಪೀಠದ ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ, ಮಡಿವಾಳ ಗುರುಪೀಠದ ಜಗದ್ಗುರು ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಈಡಿಗರ ಗುರುಪೀಠದ ಜಗದ್ಗುರು ರೇಣುಕಾನಂದ ಸ್ವಾಮೀಜಿ, ಯಾದವ ಗುರುಪೀಠದ ಜಗದ್ಗುರು ಶ್ರೀ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಹಡಪದ ಗುರುಪೀಠದ ಜಗದ್ಗುರು ಅನ್ನದಾನಿ ಅಪ್ಪಣ್ಣ ಭಾರತಿ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಜಯಮೃತ್ಯುಂಜಯ ಸ್ವಾಮೀಜಿಯವರು , ಅಂಬಿಗರ ಗುರುಪೀಠದ ಜಗದ್ಗುರು ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿಯವರನ್ನು
ಒಳಗೊಂಡಿತ್ತು.
