News (ಸುದ್ದಿ)
ಮುತ್ತಪ್ಪ ರೈ ನಿಧನ ಎಲ್ಲರಲ್ಲೂ ಹೀಗೊಂದು ಮನವಿ : heggaddesamachar.com

ಬೆಂಗಳೂರು: ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಶುಕ್ರವಾರ ವಿಧಿವಶರಾಗಿದ್ದಾರೆ.
ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಒಂದು ವರ್ಷದ ಹಿಂದೆ ಕ್ಯಾನ್ಸರ್ಗೆ ತುತ್ತಾಗಿದ್ದ ಅವರು ಕೆಲವು ದಿನದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಲ್ಲಿಯೇ ಕೊನೆಯುಸಿರು ಎಳೆದರು.
ಇಬ್ಬರು ಪುತ್ರರು, ಮೂವರು ಸಹೋದರರು ಹಾಗೂ ಒಬ್ಬ ಸಹೋದರಿ ಇದ್ದಾರೆ. ರಾಮನಗರ ತಾಲ್ಲೂಕಿನ ಬಿಡದಿಯಲ್ಲಿ ಇರುವ ಅವರ ಸ್ವಗೃಹದಲ್ಲಿ ಕೆಲವೇ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸಾರ್ವಜನಿಕರಿಗೆ ಅಂತ್ಯಕ್ರಿಯೆ ಯಲ್ಲಿ ಪಾಲ್ಗೊಳ್ಳಲು ಅವಕಾಶ ಇಲ್ಲ ದಯವಿಟ್ಟು ಯಾರೂ ಬಂದು ಅಹಿತಕರ ಘಟನೆ ಸೃಷ್ಟಿ ಮಾಡಬೇಡಿ ಎಂದು ಕುಟುಂಬದವರು ತಿಳಿಸಿದ್ದಾರೆ.