News (ಸುದ್ದಿ)
ರಾಜ್ಯದಲ್ಲಿ ಇಂದು ಹೊಸದಾಗಿ 18 ಜನರಿಗೆ ಕೊರೊನಾ ಪಾಸಿಟಿವ್: heggaddesamachar.com

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 408ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು 18 ಜನರಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಸೋಂಕಿತರ ಸಂಖ್ಯೆ 408ಕ್ಕೆ ಏರಿಕೆಯಾಗಿರುವುದಾಗಿ ತಿಳಿಸಿದೆ.
ಇದು ಹೊಸದಾಗಿ 11 ವಿಜಯಪುರ, 5 ಕಲಬುರ್ಗಿ, 1 ಗದಗ ಮತ್ತು ಬೀದರ್ ನಲ್ಲಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 408ಕ್ಕೆ ಏರಿಕೆಯಾಗಿದೆ. ಇಂದು 2093 ಕೊರೊನಾ ಶಂಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 18 ಜನರಿಗೆ ಕೊರೊನಾ ಪಾಸಿಟೀವ್ ಪತ್ತೆಯಾಗಿದೆ.
