Jobs & ಶಿಕ್ಷಣ

ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಒತ್ತಾಯ

Spread the love

ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಒತ್ತಾಯ
ಕೋವಿಡ್‌-19 ಹಿನ್ನೆಲೆಯಲ್ಲಿ ರಾಜ್ಯದ ವಿದ್ಯಾರ್ಥಿ ಸಮುದಾಯ ಎದುರಿಸುತ್ತಿರುವ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸುವಂತೆ
ಕಾಂಗ್ರೆಸ್ ಮುಖಂಡರಾದ ಜಿ ಶ್ರೀನಾಥ್ ಬಾಬು ಆಗ್ರಹ

High angle view of video conference with teacher on laptop at home. College student learning maths while watching online webinar, listening audio course. Top view of girl in video call with personal tutor on computer, distance and e-learning education concept.

‘ಕೊರೊನಾ ಸೋಂಕಿನಿಂದ ಇಡೀ ದೇಶ ಸಂಕಷ್ಟಕ್ಕೆ ಸಿಲುಕಿದೆ. ಜನರು ಆಹಾರ, ಬಟ್ಟೆ, ಆಶ್ರಯ ಮತ್ತು ಉದ್ಯೋಗಕ್ಕೆ ಪರಿತಪಿಸುತ್ತಿದ್ದಾರೆ. ವಿದ್ಯಾರ್ಥಿ ಸಮುದಾಯ ಸಹ ಇದಕ್ಕೆ ಹೊರತಾಗಿಲ್ಲ. ಆದರೆ, ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿನ ಬಗ್ಗೆ ಗಮನ ಹರಿಸುತ್ತಿಲ್ಲ’

‘ಕೊರೊನಾ ಸೋಂಕಿನ ಸಂಕಷ್ಟ ದಿಂದ ಜನ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.  ಸರ್ಕಾರಕ್ಕೆ ವಿದ್ಯಾರ್ಥಿ ಸಮುದಾಯದ ಬಗ್ಗೆ ಕಾಳಜಿಯಿಲ್ಲ. ಖಾಸಗಿ ಶಿಕ್ಷಣ ಸಂಸ್ಥೆಗಳ ಕೈಗೊಂಬೆಯಾಗಿರುವ ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಜತೆ ಚೆಲ್ಲಾಟವಾಡುತ್ತಿದೆ’
‘ಗಾಯದ ಮೇಲೆ ಬರೆ ಎಳೆದಂತೆ ಸರ್ಕಾರ ಆನ್‌ಲೈನ್‌ ಶಿಕ್ಷಣ ವ್ಯವಸ್ಥೆ ಜಾರಿಗೆ ಮುಂದಾಗಿದೆ. ಸರ್ಕಾರದ ಈ ನಡೆ ಖಾಸಗಿ ಶಿಕ್ಷಣ ಸಂಸ್ಥೆಗಳ ಹಿತ ಕಾಯುವ ಹುನ್ನಾರ. ಸರ್ಕಾರಕ್ಕೆ ಮಕ್ಕಳ ಸುರಕ್ಷತೆಗಿಂತ ಖಾಸಗಿ ಶಿಕ್ಷಣ ಸಂಸ್ಥೆಗಳ ರಕ್ಷಣೆಯೇ ಮುಖ್ಯವಾಗಿದೆ. ಶಿಕ್ಷಣ ಸಂಸ್ಥೆಗಳು ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ವಂತಿಗೆಗಾಗಿ ಪೋಷಕರನ್ನು ಸುಲಿಗೆ ಮಾಡುತ್ತಿವೆ’
ವ್ಯಾಪಾರೀಕರಣ: ‘ಶಿಕ್ಷಣವು ವ್ಯಾಪಾರೀಕರಣವಾಗಿದೆ. ಶಿಕ್ಷಣ ಸಂಸ್ಥೆಗಳು ಹಣ ಸಂಪಾದನೆಗಾಗಿ ಸರ್ಕಾರದ ಮೇಲೆ ಒತ್ತಡ ತಂದು ಆನ್‌ಲೈನ್‌ ಶಿಕ್ಷಣ ವ್ಯವಸ್ಥೆ ಜಾರಿಯಾಗುವಂತೆ ಮಾಡಿವೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ಆಟಾಟೋಪಕ್ಕೆ ಕಡಿವಾಣ ಹಾಕದೆ ಕೈಚೆಲ್ಲಿದ್ದಾರೆ’
‘ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಎಲ್ಲಾ ಪರೀಕ್ಷೆ  ರದ್ದು ಪಡಿಸಬೇಕು.  6 ತಿಂಗಳ ಕಾಲ ಎಲ್ಲಾ ಬಗೆಯ ಶೈಕ್ಷಣಿಕ ಶುಲ್ಕ ಮನ್ನಾ ಮಾಡಬೇಕು. ದ್ವಿತೀಯ ಪಿಯುಸಿವರೆಗೆ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ನೀಡಬೇಕು. ಕೇರಳ ಸರ್ಕಾರದ ಮಾದರಿಯಲ್ಲಿ ರಾಜ್ಯದಲ್ಲೂ ಪ್ರತಿ ವಿದ್ಯಾರ್ಥಿಗೆ ಉಚಿತವಾಗಿ ತಿಂಗಳಿಗೆ 10 ಕೆ.ಜಿ ಆಹಾರ ಧಾನ್ಯ  ನೀಡಬೇಕು. ಆನ್‌ಲೈನ್‌ ಶಿಕ್ಷಣ ಕಡ್ಡಾಯ ಮಾಡಬಾರದು’ ಎಂದರು.


‘ಸರ್ಕಾರ ಪ್ರಸಕ್ತ ಶೈಕ್ಷಣಿಕ ವರ್ಷದ ದಾಖಲಾತಿಗೆ ಅನುಮತಿ ನೀಡುವ ಮುನ್ನವೇ ಶಿಕ್ಷಣ ಸಂಸ್ಥೆಗಳು ಅನಧಿಕೃತವಾಗಿ ಆನ್‌ಲೈನ್‌ನಲ್ಲಿ ತರಗತಿ  ನಡೆಸುತ್ತಿವೆ. ನಿಯಮಬಾಹಿರವಾಗಿ ಪೋಷಕರಿಗೆ ದುಪ್ಪಟ್ಟು ಶುಲ್ಕ ವಸೂಲಿ ಮಾಡುತ್ತಿದ್ದು ಇಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಸರ್ಕಾರ ಶಿಸ್ತುಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.

Leave a Reply

Your email address will not be published. Required fields are marked *