News (ಸುದ್ದಿ)
ಸುಮಲತಾ ಅಂಬರೀಶ್ ರವರಿಂದ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿ ಕಿಟ್ ವಿತರಣೆ: heggaddesamachar.com

ಮಾನ್ಯ ಮಂಡ್ಯ ಲೋಕಸಭಾ ಸದಸ್ಯರಾದ ಶ್ರೀಮತಿ ಸುಮಲತಾ ಅಂಬರೀಶ್ ರವರು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿ ಕೋವಿಡ್-19 ಸೋಂಕಿನಿಂದ ನಿರ್ಬಂಧಿತ (ಸೀಲ್ ಡೌನ್) ಪ್ರದೇಶವಾದ ಸಾತೇನಹಳ್ಳಿ ಗ್ರಾಮಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು, ನಂತರ ಸಾತೇನಹಳ್ಳಿ ಗ್ರಾಮದ ಗ್ರಾಮಸ್ಥರಿಗೆ ಶ್ರೀಮತಿ ಸುಮಲತಾ ಅಂಬರೀಶ್ ಅವರ ಬೆಂಬಲಿಗರು ಹಾಗೂ ಪ್ರಾಚ್ಯವಸ್ತು ಸಂಗ್ರಹಕಾರರು ಆದ ಶ್ರೀ ಎನ್. ಜೆ. ರಾಮಕೃಷ್ಣ ಅವರ ಸಹಯೋಗದೊಂದಿಗೆ ಅಗತ್ಯ ದಿನಸಿ ಕಿಟ್ ಗಳನ್ನು ವಿತರಿಸಿದರು.
Post Views:
494