News (ಸುದ್ದಿ)

10 ದಿನದಲ್ಲಿ ಪರೀಕ್ಷೆ – S.S.L.C ಮಕ್ಕಳಿಗೆ ಹೊಸ Rules & Regulations ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಡಬೇಕಾದದ್ದೇನು ಗೊತ್ತಾ!?: heggaddesamachar.com

Spread the love

ಕೋವಿಡ್-19 ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 4 ರವರೆಗೆ, ಪಿಯುಸಿಯ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18ರಂದು ನಡೆಸಲು ಸರಕಾರ ತೀರ್ಮಾನಿಸಿದೆ.

ಎಸ್ ಎಸ್ ಎಲ್ ಸಿಯ ಇಂಗ್ಲೀಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳಿಗೆ ಒಂದೊಂದು ದಿನದ ಅಂತರವಿರಲಿದೆ. ಒಟ್ಟಾರೆ ಎಲ್ಲಾ ಪರೀಕ್ಷೆಗಳು 10 ದಿನದಲ್ಲಿ ಮುಗಿಯಲಿದೆ ಎಂದರು.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ 2879 ಪರೀಕ್ಷಾ ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಿದೆ. ಕೇಂದ್ರದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಿಸಲಾಗುತ್ತದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದ್ದಾರೆ.

ಎಲ್ಲಾ ವಿದ್ಯಾರ್ಥಿಗಳು ಸ್ಯಾನಿಟೈಸರ್ ಬಳಸಬೇಕು, ಇದಕ್ಕಾಗಿ ರಾಜ್ಯ ಸ್ಕೌಟ್ ಮತ್ತು ಗೈಡ್ಸ್ ನ ಸಹಾಯ ದೊರೆಯಲಿದೆ. ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಇದ್ದರೆ ಬೇರೆ ಕಡೆ ಪರೀಕ್ಷೆ ಬರೆಯಲು ಅವಕಾಶ ಮಾಡುತ್ತೇವೆ. ಪರೀಕ್ಷೆ ಆರಂಭಕ್ಕೂ ಮೊದಲು ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುತ್ತೇವೆ ಎಂದರು.

ಮೊರಾರ್ಜಿ ದೇಸಾಯಿ ಶಾಲೆ, ಎಸ್ ಸಿ, ಎಸ್ ಟಿ ಹಾಸ್ಟಲ್ ಗಳನ್ನು ಕ್ವಾರಂಟೈನ್ ಮಾಡಿರುವ ಕಾರಣ ಅಲ್ಲಿನ ವಿದ್ಯಾರ್ಥಿಗಳು ಹತ್ತಿರದ ಶಾಲೆಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಗುವುದು. ವಲಸೆ ಕಾರ್ಮಿಕರ ಮಕ್ಕಳಿಗೆ ಕೂಡಾ ಇದೇ ರೀತಿ ವ್ಯವಸ್ಥೆ ಮಾಡಲಾಗುವುದು ಎಂದರು.

Leave a Reply

Your email address will not be published. Required fields are marked *