News (ಸುದ್ದಿ)

Breaking:- ವಲಸೆ ಕಾರ್ಮಿಕರ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ- ಮಾಜಿ ಸಚಿವ ಧ್ರುವನಾರಾಯಣ್ ವಾಗ್ದಾಳಿ: heggaddesamachar.com

Spread the love

ಸಚಿವ ಲಾಕ್ ಡೌನ್ ನಿಂದಾಗಿ ದೇಶಾದ್ಯಂತ ವಲಸೆ ಕಾರ್ಮಿಕರು ತುಂಬಾ ತೊಂದರೆಗೆ ಸಿಲುಕಿದ್ದಾರೆ.
ವಲಸೆ ಕಾರ್ಮಿಕರ ರಕ್ತ ಬೆವರಿನ ಜೊತೆ ಕೇಂದ್ರ, ರಾಜ್ಯ ಸರ್ಕಾರಗಳು ಚೆಲ್ಲಾಟವಾಡುತ್ತಿವೆ.
ವಿದೇಶದಲ್ಲಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುವ ವಿಚಾರದಲ್ಲಿ ತೋರಿದ ಉತ್ಸಾಹವನ್ನು ವಲಸೆ ಕಾರ್ಮಿಕರ ವಿಚಾರದಲ್ಲಿ ತೋರಿಲ್ಲ.
ವಲಸೆ ಕಾರ್ಮಿಕರ ವಿಚಾರದಲ್ಲಿ ದ್ವಂದ್ವ ನೀತಿ, ನಿರ್ಲಕ್ಷ್ಯ ವಹಿಸಲಾಗುತ್ತಿದೆ.
ವಲಸೆ ಕಾರ್ಮಿಕರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ರಾಜ್ಯ ಸರ್ಕಾರಗಳ ಕಾರ್ಯವೈಖರಿ ವಿರುದ್ಧ ಮಾಜಿ ಸಂಸದ ಆರ್. ಧ್ರುವನಾರಾಯಣ್ ವಾಗ್ದಾಳಿ.
ಕೊರೊನಾ ವಿಚಾರದಲ್ಲಿ ಜುಬಿಲೆಂಟ್ ಕಾರ್ಖಾನೆಯಿಂದಾಗಿ ಇಡೀ ಮೈಸೂರು ಜಿಲ್ಲೆ ಹಾಗೂ ದಕ್ಷಿಣ ಕಾಶಿ ನಂಜನಗೂಡಿಗೆ ಕಳಂಕ.
ಮೈಸೂರಿನಲ್ಲಿ ಮಾಜಿ ಸಂಸದ ಆರ್. ಧ್ರುವನಾರಾಯಣ್ ಮೈಸೂರಿನಲ್ಲಿ ಹೇಳಿಕೆ.
ಜುಬಿಲೆಂಟ್ ಕಾರ್ಖಾನೆಯ ವಿಚಾರದಲ್ಲಿ ಸಚಿವರು ನೀಡಿರುವ ಹೇಳಿಕೆಗಳು ವಿಭಿನ್ನವಾಗಿವೆ.
ಒಬ್ಬೊಬ್ಬ ಸಚಿವರು ಒಂದೊಂದು ರೀತಿಯ ಹೇಳಿಕೆ ನೀಡಿದ್ದಾರೆ.


ವಿಶೇಷ ತನಿಖಾಧಿಕಾರಿಯಾಗಿದ್ದ ಹರ್ಷಗುಪ್ತ ಕೂಡ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.
ಇದರ ನಡುವೆ ನಂಜನಗೂಡು ಶಾಸಕ ಹರ್ಷವರ್ಧನ್ ಅವರು ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆದಿಲ್ಲ ಎಂದು ಹೇಳಿದ್ದಾರೆ.
ಸ್ವತಃ ಬಿಜೆಪಿ ಶಾಸಕರೇ ರಾಜ್ಯ ಸರ್ಕಾರದ ಬಗ್ಗೆ ಅನುಮಾನಗಳಿಗೆ ಎಡೆ ಮಾಡಿಕೊಡುವಂತೆ ಹೇಳಿದ್ದಾರೆ.
ಹಾಗಾಗಿ ವಿಶೇಷ ತನಿಖಾಧಿಕಾರಿ ಹರ್ಷಗುಪ್ತ ಸಲ್ಲಿಸಿರುವ ತನಿಖಾ ವರದಿಯನ್ನು ಕೂಡಲೇ ಬಹಿರಂಗ ಪಡಿಸಬೇಕು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಂಸದ ಆರ್.ಧ್ರುವನಾರಾಯಣ್ ಒತ್ತಾಯ.


Leave a Reply

Your email address will not be published. Required fields are marked *